ಧಾರವಾಡ :ಕರ್ನಾಟಕ ವಿಧಾನಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ವಿಜೇತ ಅಭ್ಯರ್ಥಿ ಎಸ್.ವಿ.ಸಂಕನೂರ ಅವರಿಗೆ ಚುನಾವಣಾ ವೀಕ್ಷಕರಾಗಿರುವ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಚುನಾವಣಾಧಿಕಾರಿಯಾಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಮಾಣ ಪತ್ರ ನೀಡಿದರು. ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ, ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್, ಗದಗ ಜಿಲ್ಲಾಧಿಕಾರಿ ಸುಂದರೇಶಬಾಬು, ಉತ್ತರ ಕನ್ನಡ ಜಿಲ್ಲಾಧಿಕಾರಿ ಹರೀಶಕುಮಾರ್ ಮತ್ತಿತರರು ಉಪಸ್ಥಿತರಿದ್ದರು.