ಹುಬ್ಬಳ್ಳಿ: ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾಳ ತಂದೆ ನಿರಂಜನಯ್ಯ ಹಿರೇಮಠ, ತಾಯಿ ಗೀತಾ ಹಿರೇಮಠ ಅವರು ಇಂದು ನಗರಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಹತ್ಯೆಗೈದ ಹಂತಕನಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಮನವಿ ಮಾಡಿದರು.

ನಗರದ ನೆಹರೂ ಮೈದಾನದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯ ಸಂದರ್ಭದಲ್ಲಿ ಕೆಲ ಹೊತ್ತು ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿದ ಬಳಿಕ ಮನವಿಯನ್ನು ಸಲ್ಲಿಸಿದರು. ಈ ವೇಳೆ ಶಾ ಸಾಂತ್ವನ ಹೇಳಿದರು..

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ನೇಹಾ ಸಹೋದರ ನಿಹಾಲ್ ಹಿರೇಮಠ ಉಪಸ್ಥಿತರಿದ್ದರು.