ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರು ಹುಬ್ಬಳ್ಳಿಗೆ ಬಂದು ಇವತ್ತಿಗೆ 100 ವರ್ಷಗಳು ತುಂಬಿದ ಪ್ರಯುಕ್ತ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಸಕರಾದ ಪ್ರಸಾದ್ ಅಬ್ಬಯ್ಯ, ಶಾಸಕಿ ಕುಸುಮಾವತಿ ಶಿವಳ್ಳಿ, ಹು-ಧಾ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲಕುಮಾರ್ ಪಾಟೀಲ್, ಅಲ್ತಾಫ್ ಹಳ್ಳೂರ ಸೇರಿದಂತೆ ನೂರಾರು ಮುಖಂಡರು ಪಾಲ್ಗೊಂಡಿದ್ದರು.