ಲೋಕಸಭೆ ಚುನಾವಣೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯ ಪಡೆಯುವ ಕುರಿತಂತೆ ನಗರದ ತಗಚಗುಪ್ಪೆ, ರಾಮಯ್ಯನ ಪಾಳ್ಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಷ್ಠಾನದ ಅಧ್ಯಕ್ಷ ಮುನಿನಾರಾಯಣ ಅವರ ನೇತೃತ್ವದಲ್ಲಿ ರಾಜ್ಯ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ, ಜಿಲ್ಲಾ ಮಟ್ಟದ ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.