ಜಗಜ್ಯೋತಿ ಬಸವೇಶ್ವರ ಜಯಂತಿಯ ಅಂಗವಾಗಿ ಇಂದು ಹುಬ್ಬಳ್ಳಿಯ ಕೇಶ್ವಾಪುರ ವೃತ್ತದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಸವೇಶ್ವರರ ಪುತ್ಥಳಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಬೈಕ್ ಜಾಥಾಕ್ಕೆ ಚಾಲನೆ ನೀಡಿದರು. ಶಾಸಕರಾದ ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆಯ ಸದಸ್ಯರು, ಕಾರ್ಯಕರ್ತರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.