ಬೆಳಗಾವಿಯಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಬಸವೇಶ್ವರ ವೃತ್ತದಲ್ಲಿ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂದೆ ಪೂಜೆ ಸಲ್ಲಿಸಿದರು. ಮಹಾನಗರ ಪಾಲಿಕೆ ಆಯುಕ್ತ ಬಿ. ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.