ಬಸವ ಸಮಿತಿ 2024ನೇ ಸಾಲಿನ ವಿಶ್ವ ಬಸವ ಜಯಂತಿ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಕವನ ಸ್ಪರ್ಧೆಯಲ್ಲಿ ಭಾಗವಹಿಸಿದ ಹುಬ್ಬಳ್ಳಿಯ ಸರಾಫ್ ಅಸೋಸಿಯೇಷನ್ ಸಹ ಕಾರ್ಯದರ್ಶಿ ಕವಿ, ವೀರಣ್ಣ ಮ.ಹೂಲಿ ಅವರನ್ನು ಸುತ್ತೂರು ವೀರ ಸಿಂಹಾಸನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಬೇಲಿಮಠ ಸಂಸ್ಥಾನದ ಶ್ರೀ ಶಿವರುದ್ರ ಮಹಾಸ್ವಾಮಿಗಳು,ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸವನಗೌಡ ಪಾಟೀಲ ಪ್ರಮಾಣ ಪತ್ರ ನೀಡಿ ಗೌರವಿಸಿದರು.