ಜೇವರ್ಗಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ವಿಶ್ವಗುರು ಅಣ್ಣ ಬಸವಣ್ಣನವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರನ್ನು ಗಡಿಪಾರು ಮಾಡಬೇಕು, ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಬಸವ ಕೇಂದ್ರದ ತಾಲೂಕು ಘಟಕದ ಅಧ್ಯಕ್ಷರಾದ ಶರಣಬಸವ ಕಲ್ಲಾ ನೇತೃತ್ವದಲ್ಲಿ ತಹಶೀಲ್ದಾರ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.