ನವನಗರೋತ್ಥಾನ ಯೋಜನೆಯಡಿ ವಾರ್ಡ್ ಸಂಖ್ಯೆ:೪೬ ಜೆಸಿ ನಗರದ ದಿನ್ನೂರಿನ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗಳಿಗೆ ಮಂಜೂರಾಗಿರುವ ೩ಕೋಟಿ ರೂಗಳ ಅನುದಾನದಲ್ಲಿ ರಸ್ತೆ ಡಾಂಬರೀಕರಣ, ಚರಂಡಿ ಅಭಿವೃದ್ಧಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಹೆಬ್ಬಾಳ ಕ್ಷೇತ್ರದ ಶಾಸಕರಾದ ಶ್ರೀ ಬೈರತಿ ಸುರೇಶ್ ರವರು ಭೂಮಿ ಪೂಜೆ ನಡೆಸಿದರು. ಈ ಸಂದರ್ಭದಲ್ಲಿ ಆರ್.ಟಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಜಾಮಿಲ್ ಅಹ್ಮದ್ ರವರು, ಮುಖಂಡರು, ಪಕ್ಷದ ಕಾರ್ಯಕರ್ತರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.