ನಗರದ ಐಟಿಪಿಎಲ್ ರಸ್ತೆಯಲ್ಲಿರುವ ಸಿ.ಎಂ.ಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಿನ್ನೆ ೨೧ನೇ ಪದವಿ ಪ್ರದಾನ ಸಮಾರಂಭ ಕಾರ್ಯಕ್ರಮ ಜರುಗಿತು. ೨೦೨೩-೨೪ನೇ ಸಾಲಿನಲ್ಲಿ ತೇರ್ಗಡೆಯಾದ ೮೩೧ ವಿದ್ಯಾರ್ಥಿಗಳಿಗೆ ಮಾಜಿ ರಾಜ್ಯಸಭಾ ಸದಸ್ಯ ಡಾ.ಕೆ.ಸಿ ರಾಮಮೂರ್ತಿ,ಸಿ.ಎಂ.ಆರ್ ವಿಶ್ವವಿದ್ಯಾಲಯದ ಅಧ್ಯಕ್ಷ ಡಾ.ಸಬಿತಾ ರಾಮಮೂರ್ತಿ ಪದವಿ ಪ್ರಮಾಣ ಪತ್ರ ನೀಡಿ ಗೌರವಿಸಿದರು. ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವಿಸಿ ಪುರಸ್ಕರಿಸಲಾಯಿತು.