ಮಳವಳ್ಳಿ ಪಟ್ಟಣದಲ್ಲಿ ಇಂದು ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪುರಸಭೆ ಕಚೇರಿಯಿಂದ ಅಂಬೇಡ್ಕರ್ ಭವನದವರೆಗೆ ಅಂಬೇಡ್ಕರ್ ಭಾವಚಿತ್ರವನ್ನು ಹೊತ್ತ ವಾಹನ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ಶಾಸಕ ಅನ್ನದಾನಿ, ಪುರಸಭಾ ಅಧ್ಯಕ್ಷರಾದ ರಾಧಾ ನಾಗರಾಜು, ಉಪಾಧ್ಯಕ್ಷ, ನಂದಕುಮಾರ್, ಪುರಸಭಾ ಮುಖ್ಯಾಧಿಕಾರಿ ಗಂಗಾಧರ್, ವಡ್ಡರಹಳ್ಳಿ ಸಿದ್ದರಾಜು, ಪುರಸಭಾ ಸದಸ್ಯರುಗಳು, ನೌಕರರು ಪೌರಕಾರ್ಮಿಕರು ಪಾಲ್ಗೊಂಡಿದ್ದರು.