ಚಾಮರಾಜ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಪುತ್ರ ಸುನಿಲ್ ಬೋಸ್ ಅವರ ಗೆಲುವಿಗೆ ಅವಿರತವಾಗಿ ಶ್ರಮಿಸಿದ ಸಚಿವ ಹೆಚ್.ಸಿ. ಮಹದೇವಪ್ಪ ಅವರಿಗೆ ಅಹಿಂದ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಡಾ. ಎಂ. ಮುತ್ತುರಾಜ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಮಾವಳ್ಳಿ ಶಂಕರ್ ಹಾಗೂ ಸರ್ಕಾರಿ ನೌಕರರ ಎಸ್.ಸಿ., ಎಸ್. ಟಿ. ನೌಕರರ ಸಂಘದ ಅಧ್ಯಕ್ಷ ಶಿವಶಂಕರ್ ರವರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.