ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯಾಗಿ ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಪ್ರೊ.ಎನ್.ನಾಗರಾಜು ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಕುಲಪತಿ ಹೆಚ್.ಎಂ.ಮಹೇಶ್ವರಯ್ಯ ಅವರು ಪ್ರೊ.ನಾಗರಾಜು ಅವರಿಗೆ ಅಧಿಕಾರ ಹಸ್ತಾಂತರಿಸಿದರು.