ಕಲಬುರಗಿ:ಕೋವಿಡ್-19 ಹಿನ್ನೆಲೆಯಲ್ಲಿ ಕೊರೋನಾ ವೈರಸ್ ತಡೆಗಟ್ಟುವ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಎಲ್.ಇ.ಡಿ. ವಾಹನಗಳ ಮೂಲಕ ಕೈಗೊಂಡಿರುವ ವಿಶೇಷ ಜಾಗೃತಿ ಪ್ರಚಾರ ಕಾರ್ಯಕ್ಕೆ ಜಿಲ್ಲಾಧಿಕಾರಿ ಶ್ರೀಮತಿ ವಿ.ವಿ. ಜ್ಯೋತ್ಸ್ನಾ ಅವರು ಹಸಿರು ನಿಶಾನೆ ತೋರಿದರು.