ಬೀದರ: ಇಲ್ಲಿಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರು ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಶನಿವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಿದರು.