ಕಲಬುರಗಿ:ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಹಾಗೂ ಸರ್ವಜ್ಞ ಚಿಣ್ಣರ ಲೋಕ ಶಾಲೆ ಕಲಬುರಗಿಯಲ್ಲಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನ ಮಂತ್ರಿ ಜವಾಹರ್‍ಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ “ಮಕ್ಕಳ ದಿನಾಚರಣೆ”ಯನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 2019-20ನೇ ಶೈಕ್ಷಣಿಕ ಸಾಲಿನಲ್ಲಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಪ್ರಥಮ ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.