
ಚಿಕ್ಕಬಳ್ಳಾಪುರ, ಮಾ,೫- ನಗರದ ರಾಷ್ಟ್ರೀಯ ಹೆದ್ದಾರಿ ಬಿಬಿ ರಸ್ತೆಯಲ್ಲಿರುವ ನಂದಿ ರಂಗಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿರುವ ೯ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇಂದು ಸಮ್ಮೇಳನ ಅಧ್ಯಕ್ಷ ಷಡಕ್ಷರಿ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಿಂದೂ ಮತ್ತು ನಾಳೆ ಎರಡು ದಿನಗಳ ಕಾಲ ವಿವಿಧ ಕನ್ನಡಪರ ಕಾರ್ಯಕ್ರಮಗಳ ಆಯೋಜನೆಯೊಂದಿಗೆ ೯ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಸಿದ್ಧತೆ ಮಾಡಿಕೊಂಡಿದ್ದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾಕ್ಟರ್ ಕೊಡಿ ರಂಗಪ್ಪ ರವರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲ್ಲೂಕುಗಳ ಅಧ್ಯಕ್ಷರುಗಳು ಹಾಗೂ ಕಾ.ಸ.ಪ. ಸದಸ್ಯರುಗಳು ಪಾಲ್ಗೊಳ್ಳಲಿರುವರು.
ಇಂದು ಬೆಳಗ್ಗೆ ನಂದಿ ರಂಗಮಂದಿರದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಮ್ಮೇಳನ ಅಧ್ಯಕ್ಷರಿ ಜಿಲ್ಲಾಧಿಕಾರಿ ಅಧ್ಯಕ್ಷ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆಎಂ ಮುನೇಗೌಡ ಒಳಗೊಂಡಂತೆ ಪರಿಷತ್ತಿನ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಇಂದಿನಿಂದ ನಾಳೆ ಸಂಜೆಯವರೆಗೂ ವಿವಿಧ ಗೋಷ್ಠಿಗಳು ಸಾಧಕರಿಗೆ ಸನ್ಮಾನ ಕನ್ನಡ ಭಾಷಾಭಿವೃದ್ಧಿಯ ಬಗ್ಗೆ ವಿವಿಧ ರೀತಿಯ ವಿಚಾರಗಳು ಎಂಬ ವಿಶ್ವಾಸವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಡಾ. ಕೊಡಿ ರಂಗಪ್ಪ ರವರು ಪತ್ರಿಕೆಯೊಂದಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದರು.