9 ಕೋಟಿ ರೈತರಿಗೆ ನಾಡಿದ್ದು 18,000 ಕೋಟಿ ರೂಪಾಯಿ ಹಣ ವರ್ಗಾವಣೆ: ಪಿಎಂಓ

ನವದೆಹಲಿ, ಡಿ.23- ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ದೇಶದ 9 ಕೋಟಿ ರೈತ ಸಮುದಾಯಕ್ಕೆ ನಾಡಿದ್ದು 18,000 ಕೋಟಿ ರೂಪಾಯಿಯನ್ನು ರೈತರ ಖಾತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೇರ ವರ್ಗಾವಣೆ ಮಾಡಲಾಗುವುದು ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.

ಡಿಸೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿಯವರು ರೈತರ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪಿಎಂ ಕಿಸಾನ್ ಯೋಜನೆಯಡಿ ದೇಶದ 9 ಕೋಟಿ ರೈತ ಸಮುದಾಯಕ್ಕೆ ನೇರ ಹಣ ವರ್ಗಾವಣೆ ಮಾಡಿದ ಬಳಿಕ ಅವರು ರಾಜ್ಯಗಳ ರೈತರ ಸಮುದಾಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ‌ ಅವರು ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದೆ.

ಕೇಂದ್ರ ಸರಕಾರ ರೈತರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳನ್ನು ಇದೇ ವೇಳೆ ರೈತ ಸಮುದಾಯಕ್ಕೆ ಮನವಿ ಮಾಡಿಕೊಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಪಿಎಂಓ ತಿಳಿಸಿದೆ.

25 ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ‌.

ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ಕಳೆದ 28 ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳ ಕುರಿತು ರೈತರಿಗೆ ಮನವರಿಕೆ ಮಾಡಿಕೊಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಬಲ:

ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯನ್ನು ಬೆಂಬಲಿಸಿ ದೇಶದ ಹಲವು ರೈತಸಮುದಾಯ ಸಹಕಾರ ನೀಡಿದ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ