ಕಲಬುರಗಿ: ಕಲಬುರಗಿ-ದೆಹಲಿ (ಹಿಂಡನ್) ವಿಮಾನ ಸೇವೆ ಇಂದಿನಿಂದ ಆರಂಭಗೊಂಡಿದ್ದು, ಸಂಸದ ಡಾ. ಉಮೇಶ್ ಜಾಧವ್ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶಾಸಕ ಬಸವರಾಜ ಮತ್ತಿಮೂಡ,ವಿಧಾನ ಪರಿಷತ್ತು ಸದಸ್ಯ ಬಿ.ಜಿ ಪಾಟೀಲ,ವಿಮಾನ ನಿಲ್ದಾಣ ನಿರ್ದೇಶಕ ಎಸ್ ಜ್ಞನೇಶ್ವರರಾವ್,ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಹಾನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ, ಎಚ್‍ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ,ಲಿಂಗರಾಜ ಬಿರಾದಾರ,ಅರವಿಂದ ಪೋದ್ದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು