ವಿನಯ್ ಜಾಮೀನು ಅರ್ಜಿ ವಾಪಸ್
ಧಾರವಾಡ, ನ 19-ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ವಿನಯ ಜಾಮೀನು ಅರ್ಜಿಯನ್ನು ವಿನಯ್ ಪರ ವಕೀಲರು ಹಿಂದಕ್ಕೆ ಪಡೆದಿದ್ದಾರೆ.
ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ವಿನಯನನ್ನು ಬಂಧಿಸಿ ಮೂರು ದಿನಗಳ ತನಿಖೆ ನಡೆಸಿದ ನಂತರ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.
ನಂತರ ಜಾಮೀನು ಅರ್ಜಿ ಸಲ್ಲಿಸಿದ್ದ ವಿನಯ್ ಪರ ವಕೀಲರು ಇಂದು ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ.
ಇಲ್ಲಿನ 3ನೇ ಹೆಚ್ಚುವರಿ ಸೇಷನ್ಸ್ ನ್ಯಾಯಾಲಯಕ್ಕೆ ನ.9 ರಂದು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಾಪಸ್ ಪಡೆಯಲಾಗಿದೆ. ಅಲ್ಲದೇ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.
ವಿನಯ್ ತನಿಖೆಯನ್ನು ನಡೆಸಿದ್ದ ಸಿಬಿಐ ತನ್ನ ಆಕ್ಷೇಪಣಾ ಅರ್ಜಿಯನ್ನು ಇಂದು ಸಲ್ಲಿಸಬೇಕಾಗಿತ್ತು. ಆದರೆ ಸಿಬಿಐ ಆಕ್ಷೇಪಣಾ ಅರ್ಜಿ ಸಲ್ಲಿಸುವ ಮೊದಲೇ ವಿನಯ್ ಪರ ವಕೀಲರು ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ.