ರಾಮೋಹಳ್ಳಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲಿ, ಬೆಂಗಳೂರು ನಗರ ಜಿಲ್ಲೆ ಸಹಕಾರ ಒಕ್ಕೂಟ ಮತ್ತು ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ರಾಮೋಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ೬೭ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ವಿ.ವೇಣುಗೋಪಾಲ್ ಉದ್ಘಾಟಿಸಿದರು. ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಕೆ.ವಿಜಯ್‌ಕುಮಾರ್, ಪತ್ತಿನ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಶೋಭಾ ತಿಮ್ಮೆಗೌಡ, ಎ.ಎಲ್.ಸುರೇಶ್ ಇದ್ದಾರೆ.