93 ಕೊರೊನಾ ಪಾಸಿಟಿವ್ :ಇಬ್ಬರು ಸಾವು

ಕಲಬುರಗಿ:ಮೇ.31: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 93 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಇಬ್ಬರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 60074 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
318 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 57521 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
1785 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು ಇಬ್ಬರ ಸಾವಿನೊಂದಿಗೆ ಈ ವರೆಗೆ 768 ಜನರು ಸಾವಿಗೀಡಾದಂತಾಗಿದೆ .