ಧಾರವಾಡ ತಹಶಿಲ್ದಾರ ಕಚೇರಿ ಬಳಿಯ ರಿಲಾಯನ್ಸ್ ಪ್ರೆಷ್ ಮಳಿಗೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮತ್ತು ಮಾಸ್ಕ್ ಧರಿಸದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಹಾಯಕ ಆಯುಕ್ತ ಆರ್.ಎಂ.ಕುಲಕರ್ಣಿ ಅವರು 5 ಸಾವಿರ ರೂಪಾಯಿಗಳ ದಂಡ ವಿಧಿಸಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಮಹಾಂತೇಶ ಮ್ಯಾಗೇರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.