ಕಲಬುರಗಿ: ಆಳಂದ ತಾಲೂಕಿನ ಕಡಗಂಚಿ ಹತ್ತಿರದ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ನಿರ್ಮಾಣಕ್ಕೆ ಜಮೀನು ನೀಡಿದ ರೈತ ಕುಟುಂಬದವರಿಗೆ ವಿಶ್ವವಿದ್ಯಾಲಯದಲ್ಲಿ ನೌಕರಿ ನೀಡಬೇಕು ಎಂದು ಹೈದರಾಬಾದ್ ಕರ್ನಾಟಕ ರೈತ ಹಿತರಕ್ಷಣಾ ಹೋರಾಟ ಸಮಿತಿ ಇಂದು ಪ್ರಭಾರಿ ಕುಲಪತಿ ನಾಗರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.