9,81,781 ಕೋಟಿ ರೂ ಬಂಡವಾಳ ಹೂಡಿಕೆ ಒಪ್ಪಂದ: ನಿರಾಣಿ

ಬೆಂಗಳೂರು, ನ.5-ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಒಟ್ಟು 9,81,781 ಕೋಟಿ ಬಂಡವಾಳ ಹೂಡಿಕೆ ಒಪ್ಪಂದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಬಂಡವಾಳ ಹೂಡಿಕೆ ಸಮಾವೇಶ ಕುರಿತು ಮಾಹಿತಿ ನೀಡಿದರು.90 ಕ್ಜೂ ಹೆಚ್ಚು ಯೋಜನೆಗಳು ಬೆಂಗಳೂರಿನಲ್ಲಿ ಅನುಷ್ಠಾನಗೊಳ್ಖುತ್ತಿದೆ ಎಂದು ತಿಳಿಸಿದರು.
ಮೂರು ದಿನಗಳ ಸಮಾವೇಶದಲ್ಲಿ ಒಟ್ಟು 9,81,781 ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಈ ಪೈಕಿ ಒಂದು ಲಕ್ಷ ಕೋಟಿ ಮೊತ್ತದ 68 ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದರು.
5,41,369 ಕೋಟಿ ರೂ ಮೊತ್ತದ 57 ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 1,57 ಕೋಟಿ ಮೊತ್ತದ ಎರಡು ಯೋಜನೆಗಳನ್ನು ಸಮಾವೇಶದಲ್ಲಿ ಘೋಷಿಸಲಾಗಿದೆ ಎಂದು ನಿರಾಣಿ ವಿವರಿಸಿದರು.
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಡಂಬಡಿಕೆಗಳನ್ನು ಕಾಲ ಮಿತಿಯೊಳಗೆ ಅನುಷ್ಠಾನಗೊಳಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಮಾವೇಶದಲ್ಲಿ ಆಗಿರುವ ಒಪ್ಪಂದಗಳ ಪೈಕಿ ಅಂದಾಜು ಶೇ.70ರಷ್ಟು ಯೋಜನೆಗಳು ಅನುಷ್ಠಾನಗೊಳ್ಳುವ ವಿಶ್ವಾಸ ಇದೆ ಎಂದು ಅವರು ವಿವರಿಸಿದರು.