ಅಧಿಕ ಮಳೆ: ತೊಗರಿ ಬೆಳೆ ಹಾನಿ

ಕಲಬುರಗಿ,ಆ.9-ಜಿಲ್ಲೆಯ ಹಲವೆಡೆ ಅಧಿಕ ಮಳೆಯಿಂದಾಗಿ ತೊಗರಿ ಬೆಳೆ ಹಾನಿಯಾಗಿದೆ. ಬಿತ್ತನೆಯಾದ ಒಟ್ಟಾರೆ ಪ್ರದೇಶದಲ್ಲಿ ಶೇ.50 ರಷ್ಟು ಬೆಳೆ ಹಾನಿಯಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ತಿಳಿಸಿದ್ದಾರೆ.
ತೊಗರಿ ಕಣಜ ಎಂದೇ ಕರೆಯಲ್ಪಡುವ ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ತೊಗರಿ ಇಳುವರಿ ಕಡಿಮೆಯಾಗುವ ಸಾಧ್ಯತೆಗಳಿಗೆ ಎಂದು ಅವರು ತಿಳಿಸಿದ್ದಾರೆ. ಬೆಳೆ ಹಾನಿಯಾದ ಪ್ರದೇಶಗಳಿಗೆ ಕೃಷಿ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬೆಳೆ ಹಾನಿಯ ಸಮೀಕ್ಷೆ ನಡೆಸುವುದರ ಮೂಲಕ ಬೆಳೆಹಾನಿಯಾದ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.